ಡಿ.ಕೆ ಬ್ರದರ್ಸ್ ಗೆ ಬಿಗ್ ಶಾಕ್..! ಏಕ ಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ..!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗು ಡಿ.ಕೆ ಸುರೇಶ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಬೆಳ್ಗಗ್ಗೆ 6 ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುಟುಂಬಸ್ಥರನ್ನ ಪ್ರತ್ಯೇಕವಾಗಿ ಡಿಕೆಶಿ ಕಚೇರಿಗೆ ಸ್ಥಳಾಂತರಿಸಿ ಮನೆಯಲ್ಲಿ ದಾಳಿ ನಡೆಸಲಾಗುತ್ತಿದೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ನಿವಾಸ ಸೇರಿದಂತೆ ಡಿಕೆ ಬ್ರದರ್ಸ್ಗೆ ಸೇರಿದ 15 ಕಡೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳಿಂದ ದಾಳಿ ನಡೆಸಲಾಗುತ್ತಿದೆ. ಡಿಕೆಶಿ ಮನೆ ಮೇಲೆ ದಾಳಿ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.ಅಲ್ಲದೇ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ನಿವಾಸದ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇನ್ನು ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘ಡಿಕೆ ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದೀವಾಳಿ ತನವನ್ನು ತೋರಿಸುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment