ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ದರ್ಶನಕ್ಕೆ ಇಂದಿನಿಂದ ಭಕ್ತರಿಗೆ ಮುಕ್ತ ಅವಕಾಶ..!

ಗೋಕರ್ಣ: ಕೊರೊನಾ ವೈರಸ್ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಮುಚ್ಚಿದ್ದ ಪುರಾಣ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನ ಇದೀಗ ಭಕ್ತರಿಗೆ ಮುಕ್ತವಾಗಿದೆ. ಇಂದಿನಿಂದ ಭಕ್ತರು ದೇಗುಲಕ್ಕೆ ಭೇಟಿ ನೀಡಬಹುದಾಗಿದೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಮುಚ್ಚಿದ್ದ ದೇಗುಲ ಇದೀಗ ಭಕ್ತರಿಗೆ ಮುಕ್ತವಾಗಿದೆ.ಸಾರ್ವಜನಿಕರು ದೇಗುಲಕ್ಕೆ ಭೇಟಿ ನೀಡಿ ಆತ್ಮಲಿಂಗ ದರ್ಶನ ಪಡೆಯಬಹುದಾಗಿದ್ದು, ಜೊತೆಗೆ ದೇವಾಲಯದಲ್ಲಿ ವಸ್ತ್ರ ಸಂಹಿತೆ ಕೂಡ ಜಾರಿ ಮಾಡಲಾಗಿದೆ. ಭಾರತೀಯ ಉಡುಗೆಯೊಂದಿಗೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಲು ದೇವಾಲಯದ ಆಡಳಿತ ಮಂಡಳಿ ಭಕ್ತರಲ್ಲಿ ವಿನಂತಿಸಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment