ಹತ್ರಾಸ್ ನಲ್ಲಿ ನಡೆದ ದಲಿತ ಯುವತಿ ಆತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ..!

ಶಹಾಪುರ : ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ಶಹಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ತಪ್ಪು ಯಾರೇ ಮಾಡಿರಲಿ ಅವರಿಗೆ ಶಿಕ್ಷೆ ಆಗಲೇಬೇಕು ಪಕ್ಷಾತೀತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಪಾಠ ನೀಡಬೇಕು ಇಲ್ಲದಿದ್ದರೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದಲಿತ ಪರ ಸಂಘಟನೆಗಳು ಒಕ್ಕೊರಲಿನಿಂದ ಹೇಳಿದವು. ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮೇಲಿಂದ ಮೇಲೆ ದಲಿತ ಯುವತಿಯರ ಮೇಲೆ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಬಂದಿವೆ ಆದ್ದರಿಂದ ಇವುಗಳನ್ನು ಹತೋಟಿಗೆ ತರುವಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದೆ.ತಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಇಲ್ಲದಿದ್ದರೆ ಹೋರಾಟ ಉಗ್ರವಾದ ಸ್ವರೂಪ ತಾಳುತ್ತದೆ ಎಂದು ಈ ಸಂದರ್ಭದಲ್ಲಿ ಹೋರಾಟಗಾರರು ಹೇಳಿದರು.ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಆರ್ ಚೆನ್ನಬಸ್ಸು ವನದುರ್ಗ ನಾಗಣ್ಣ ಬಡಿಗೇರ್ ನಿಜಗುಣ ದೋರನಹಳ್ಳಿ ಶರಣುರಡ್ಡಿ ಹತ್ತಿಗೂಡೂರ ಶಿವಕುಮಾರ್ ತಳವಾರ್ ಚಂದ್ರಶೇಖರ್ ನಾಟೇಕರ್ ಹಾಗೂ ಇತರರು ಭಾಗ ಭಾಗವಹಿಸಿದ್ದರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment