ಕೇಂದ್ರ ಸರ್ಕಾರ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ವಿರೋಧಿಸಿ ಪ್ರತಿಭಟನೆ..!

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕೆಇಬಿ ಮುಂದೆ ಕೇಂದ್ರ ಸರ್ಕಾರದ ವಿರೋಧಿ ಧೋರಣೆತನ್ನು ಖಂಡಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಹಾಗೂ ಅಧಿಕಾರಿ ಸಂಘದಿಂದ ಪ್ರತಿಭಟನೆ ಮಾಡಲಾಯಿತು.ಪ್ರತಿಭಟನೆಯಲ್ಲಿ ಸುಮಾರು 80 ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂಧನ ಇಲಾಖೆಯ ನೌಕರರು ಮತ್ತು ಅಧಿಕಾರಿಗಳು ವಿದ್ಯುತ್ ವಿತರಣಾ ಕಂಪನಿಗಳ ಸಹಭಾಗಿಗಳಾಗಿರುತ್ತಾರೆ.ವಿತರಣಾ ಕಂಪನಿಗಳ ಉದ್ಯೋಗಿಗಳು ತಮ್ಮ ಆರೋಗ್ಯವನ್ನು ಲೆಕ್ಕಿಸದೇ ನಿರಂತರ ವಿದ್ಯುತ್ ಸರಬರಾಜು ಮಾಡುವ ಒತ್ತಡದಲ್ಲಿ ಶ್ರಮಿಸುತ್ತಿದ್ದಾರೆ. ಆದ್ರೆ ಈಗಾ ಕೇಂದ್ರ ಸರ್ಕಾರ ಏಕಾ ಏಕಿ ಇಂತಹ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಸಹಭಾಗಿತ್ವದೊಂದಿಗೆ ವಿಸ್ತಾರವಾಗಿ ಚರ್ಚಿಸಿ ಒಮ್ಮತದಿಂದ ನಿರ್ಧರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಹಾಗೂ ಅಧಿಕಾರಿಗಳ ಸಂಘದಿಂದ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದರು.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Please follow and like us:

Related posts

Leave a Comment