ಡಿಕೆಶಿ ಅವರ ಮೇಲೆ ಸಿಬಿಐ ದಾಳಿ ಖಂಡಿಸಿ ಬೃಹತ್ ಪ್ರತಿಭಟನೆ..!

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮೇಲೆ ಸಿಬಿಐ ದಾಳಿ ಮಾಡಿಸಿರುವುದನ್ನು ಖಂಡಿಸಿ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿತು.ಇಲ್ಲಿನ ರೈಲ್ವೆ ನಿಲ್ದಾಣದ ಹತ್ತಿರದ ಅಂಬೇಡ್ಕರ್ ಪುತ್ಥಳಿ ಹತ್ತಿರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಮೇಲೆ ರಾಜಕೀಯ ದುರುದ್ದೇಶದಿಂದ ಸಿಬಿಐ ದಾಳಿ ನಡೆಸಿ ಉಪ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಕುಗ್ಗಿಸುಲು ಹುನ್ನಾರ ಬಿಜೆಪಿ ಸರ್ಕಾರ ಮಾಡಿದೆ.ಬಿಜೆಪಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇನ್ನು ಕೂಡಲೇ ಬಿಜೆಪಿ ಸರ್ಕಾರ ಸೇಡಿನ ರಾಜಕೀಯ ಕೈಬಿಡಬೇಕು, ಡಿ.ಕೆ.ಶಿ ವಿರುದ್ಧ ನಡೆಸುತ್ತಿರುವ ಷಡ್ಯಂತ್ರ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment