ಉತ್ತರ ಪ್ರದೇಶದದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ; ಉತ್ತರ ಪ್ರದೇಶದ ಹತ್ರಾಸ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯ ತಹಶಿಲ್ದಾರರ ಬಳಿ ಕಚೇರಿ ಎದುರುಗಡೆ ವಿವಿದ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು. ನಗರದದಲ್ಲಿ ರ್ಯಾಲಿ ಮುಖಾಂತರ ಪ್ರತಿಭಟನೆ ಮಾಡಿದ ಅವರು ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲ್ಲೇ ಇವೇ ಎಂದು ಆರೋಪಿಸಿದರು.ಅಲ್ಲದೇ ಅತ್ಯಾಚಾರಿಗಳನ್ನು ಮಟ್ಟ ಹಾಕುವಲ್ಲಿ ಯೋಗಿ ಅದಿತ್ಯನಾಥ ಸರ್ಕಾರ ವಿಫಲವಾಗಿದೆ. ಯುಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ.ಹಾಗಾಗಿ ಕೂಡಲೇ ಉತ್ತರ ಪ್ರದೇಶ ರಾಜ್ಯ ಸರ್ಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಅಗ್ರಹಿಸಿದರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment