ಹತ್ರಾಸ್ ನ ವಾಲ್ಮೀಕಿ ಯುವತಿಯ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ..!

ಬಳ್ಳಾರಿ: ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಮನಿಷಾ ವಾಲ್ಮೀಕಿ ಯುವತಿಯ ಅತ್ಯಾಚಾರ ಬರ್ಬರ ಕೊಲೆ ಮತ್ತು ಈ ಅವಮಾನವೀಯ ಕೃತ್ಯ ವಿರೋಧಿಸಿ ನೊಂದ ಕುಟುಂಬದ ಭೇಟಿಗೆ ತೆರಳಿದ್ದ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ , ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ತಡೆದ ಉತ್ತರ ಪ್ರದೇಶ ಪೊಲೀಸರ ಕ್ರಮ ಖಂಡಿಸಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ನೇತೃತ್ವದಲ್ಲಿ ಇಂದು ಸಂಜೆ ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹುತ್ ಪಂಜಿನ ಮೆರವಣಿಗೆ ,ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶದ #ಹತ್ರಾಸ್ ಜಿಲ್ಲೆಯಲ್ಲಿ ಹಾಡು ಹಗಲೇ 19 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂಥದ್ದು. ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕಿಯ ಪಾಲಕರ ಅನುಮತಿ ಪಡೆಯದೆ ಪೊಲೀಸರೇ ಗೌಪ್ಯವಾಗಿ ಅನುಮಾನಕ್ಕೆಡೆ ಮಾಡಿಕೊಡುವಂತೆ ಅಂತ್ಯಸಂಸ್ಕಾರ ನಡೆಸಿರುವುದರ ಹಿಂದಿನ ಉದ್ದೇಶವೇನು. ನಿಜಕ್ಕೂ ಘೋರ, ಅಮಾನವೀಯ.ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಸಂತ್ರಸ್ತೆಯ ಪೋಷಕರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರ ಮೇಲೆ ಪೋಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದ ಉತ್ತರ ಪ್ರದೇಶ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ, ಹತ್ರಾಸ್ ಅತ್ಯಾಚಾರ, ಕೊಲೆ ವಿರೋಧಿಸಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ನೇತೃತ್ವದಲ್ಲಿ ಇಂದು ಸಂಜೆ ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹುತ್ ಪಂಜಿನ ಮೆರವಣಿಗೆ ನಡೆಸಿದರು.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.ಇಂಥ ಬೇಜವಾಬ್ದಾರಿತನ, ಉದ್ಧಟತನ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ತ್ವರಿತವಾಗಿ ಪ್ರಕರಣದ ವಿಚಾರಣೆ ನಡೆಸಿ ಅತ್ಯಾಚಾರಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಇಂತಹ ಸರಕಾರಗಳಿಗೆ ರಕ್ಷಣೆ ಕೊಡುತ್ತಿರುವ ಕೇಂದ್ರ ಸರಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೌನವನ್ನು ತೀವ್ರವಾಗಿ ಖಂಡಿಸಿದರು.ಪ್ರತಿಭಟನೆಯಲ್ಲಿ ನೂರಾರು ಯುವ ಕಾರ್ಯಕರ್ತರು,ಮಹಿಳೆಯರು ,ಮಂಗಳ ಮುಖಿಯರು ,ರೈತರು,ನಾಗರಿಕರು ಭಾಗವಹಿಸಿದ್ದರು.

ವರದಿ-ಮೆಹೆಬೂಬ್ ಸಬ್ ಎಕ್ಸ್ ಪ್ರೆಸ್ ಟಿವಿ ಹರಪನಹಳ್ಳಿ

Please follow and like us:

Related posts

Leave a Comment