ತಿಪಟೂರು

ಆತ್ಯಾಚಾರ ಹಾಗೂ ಕೊಲೆ ಖಂಡಿಸಿ ಕ್ಯಾಂಡಲ್ ಲೈಟ್ ಪ್ರತಿಭಟನೆ..!

Published

on

ತಿಪಟೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ನಗರದ ಪೈ ಹೋಟೆಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ ಎನ್ ಸ್ವಾಮಿ ಇಂಥ ಹೀನ ಕೃತ್ಯವನ್ನು ಇಡೀ ದೇಶವೇ ಖಂಡಿಸುತ್ತದೆ ಅತ್ಯಾಚಾರ ನಡೆಸಿರುವ ಆರೋಪಿಗಳು ಆಕೆಯ ಕೈ ಕಾಲು ಮುರಿದು ನಾಲಿಗೆ ಕತ್ತರಿಸಿ ಸತ್ಯ ನುಡಿಯದಂತೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ ಕೂಡಲೇ ಸರಕಾರ ಸಂತ್ರಸ್ತೆ ನೀಡಿದ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಬಂಧಿಸಿರುವ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು ಪಕ್ಷಾತೀತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ತಕ್ಕ ಪಾಠ ನೀಡಬೇಕು ಇಲ್ಲದಿದ್ದರೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮೇಲಿಂದ ಮೇಲೆ ದಲಿತ ಯುವತಿಯರ ಮೇಲೆ ಅತ್ಯಾಚಾರ ಕೊಲೆ ಪ್ರಕರಣಗಳು ನಡೆಯುತ್ತಲೇ ಬಂದಿವೆ ಆದ್ದರಿಂದ ಇವುಗಳನ್ನು ಹತೋಟಿಗೆ ತರುವಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದೆ.ತಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಇಲ್ಲದಿದ್ದರೆ ಹೋರಾಟ ಉಗ್ರವಾದ ಸ್ವರೂಪ ತಾಳುತ್ತದೆ ಎಂದು ಈ ಸಂದರ್ಭದಲ್ಲಿ ಹೋರಾಟಗಾರರು ಹೇಳಿದರು. ಈ ಪ್ರತಿಭಟನೆಯಲ್ಲಿ ಎಸ್ ಎನ್ ಸ್ವಾಮಿ,ತಿಮ್ಲಾಪುರ ದೇವರಾಜು,ಬಸ್ತಿಹಳ್ಳಿ ರಾಜಣ್ಣ,ಸಿಬಿ.ಶಶಿಧರ್, ಶ್ರೀಕಾಂತ್, ಮನೋಹರ್ ಪಾಟೀಲ್,ಅಲ್ಲಾ ಬಕಾಶ್, ಸೈಫುಲ್ಲಾ, ವಿಜಯ್ ಕುಮಾರ್, ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.
ವರದಿ- ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version