ಅತ್ಯಾಚಾರ ಖಂಡಿಸಿ ಮುದಗಲ್ ನಲ್ಲಿ ಕರವೇ ಪ್ರತಿಭಟನೆ..!

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಕಾರ್ಯಕರ್ತರು ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಸ್ ಎಂಬಲ್ಲಿ ದಲಿತ ಯುವತಿ ಮನೀಶಾ ವಾಲ್ಮೀಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡಸಿದ ಆರೋಪಿಗಳ ಮೇಲೆ ಗಲ್ಲು ಶಿಕ್ಷೆ ನೀಡಬೇಕು ಎಂದು ಪಟ್ಟಣದ ನಾಡ ಕಚೇರಿ ಉಪ ತಹಶೀಲ್ದಾರರ ಮೂಲಕ ರಾಷ್ರ್ಟಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಮಾಜಿ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಿ ಯುವತಿ ನಮನೀಶಾ ವಾಲ್ಮೀಕಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.ಸಂತ್ರಸ್ಥೆ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುದಗಲ್ ಘಟಕ ವತಿಯಿಂದ ಮನವಿ ಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಎಸ್. ಎ. ನಯೀಮ್,ಎಸ್ ಎನ್ ಖಾದ್ರಿ ಸಂಗಪ್ಪ ಹೂನೂರು, ನಾಗರಾಜ ಮಟ್ಟೂರು ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ- ವೀರೇಶ್ ಅರಮನಿ ಎಕ್ಸ್‌ಪ್ರೆಸ್ ಟಿವಿ ಲಿಂಗಸೂಗೂರು

Please follow and like us:

Related posts

Leave a Comment