Uncategorized

ಮನಿಷಾ ಮೇಲಿನ ಆತ್ಯಾಚಾರ ಖಂಡಿಸಿ ಯುಪಿ ಸರ್ಕಾರವನ್ನು ವಜಾಗೊಳಿಸುವಂತೆ ಪ್ರತಿಭಟನೆ..!

Published

on

ಮಳವಳ್ಳಿ: ಉತ್ತರ ಪ್ರದೇಶದಲ್ಲಿ ಮನಿಷಾ ವಾಲ್ಮಿಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಹಾಗೂ ಯುಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಬಾಬು ಜಗಜೀವನ ರಾಮ್ ವಿಚಾರ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆ ಹಾಗೂ ದಲಿತಪರ ಸಂಘಟನೆಗಳ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು ಪಟ್ಟಣದ ಪ್ರಮುಖಬೀದಿಗಳಲ್ಲಿ ಕೇಂದ್ರ ಸರ್ಕಾರ ಹಾಗೂ ಯು.ಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದರು.ಇನ್ನೂ ಡಾ. ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಬಾಳೆಹೊನ್ನಿಗ ಕುಮಾರ ಮಾತನಾಡಿ, ಮನಿಷಾ ವಾಲ್ಮಿಕಿ ರವರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಇದಲ್ಲದೆ ಯು.ಪಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಡಾ.ಬಾಬು ಜಗ ಜೀವನ ರಾಮ್ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಯ ಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ನಾಗೇಶ್, ತಾಲ್ಲೂಕು ಅಧ್ಯಕ್ಷ ರಮೇಶ್, ಪ್ರಧಾನಕಾರ್ಯದರ್ಶಿ ಗುರುಸಿದ್ದಯ್ಯ, ಡಿಹೆಚ್ ಎಸ್ ಜಿಲ್ಲಾ ಸಂಚಾಲಕ ಕೃಷ್ಣ, ಮಾದಿಗ ಸಮಾಜ ಕೃಷ್ಣಮೂರ್ತಿ, ಸೇರಿದಂತೆ ಮತ್ತಿತ್ತರರು ಇದ್ದರು

ವರದಿ – ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version