Uncategorized

ಡ್ರಗ್ಸ್ ನಂಟು ಪ್ರಕರಣ : ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರು..!

Published

on

ಮುಂಬೈ: ಡ್ರಗ್ಸ್ ನಂಟು ಪ್ರಕರಣದ ಆರೋಪದಲ್ಲಿ ಬಂಧನದಲ್ಲಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ವೇಳೆ ಮುಂಬೈ ಎನ್ಸಿಬಿ ಅಧಿಕಾರಿಗಳಿಂದ ನಟಿ ರಿಯಾ ಚಕ್ರವರ್ತಿ ಬಂಧಿಸಲಾಗಿತ್ತು.ನಿನ್ನೆ ನಟಿ ರಿಯಾ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಎನ್ಡಿಪಿಎಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.ಈ ವೇಳೆ ವಾದ ಆಲಿಸಿದ ನ್ಯಾಯಾಲಯ ಅಕ್ಟೋಬರ್ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿತ್ತು. ಅತ್ತ ವಿಶೇಷ ನ್ಯಾಯಾಲಯದಿಂದ ಆದೇಶ ಬರುತ್ತಿದ್ದಂತೆ, ನಟಿ ರಿಯಾ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.ಇಂದು ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ನಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದ್ರೆ ರಿಯಾ ಸಹೋದರ ಶೌವಿಕ್ ಚಕ್ರವರ್ತಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version