ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ, ಅಪರಿಚಿತರ ಶೂಟೌಟ್ ಗೆ ಬೆಚ್ಚಿ ಬಿದ್ದ ಜನ..!

ಸುಳ್ಯ : ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಶೂಟೌಟ್ ಗೆ ಸುಳ್ಯದ ಜನ ಬೆಚ್ಚಿಬಿದ್ದಿದ್ದಾರೆ.ಸುಳ್ಯದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಸಂಪತ್ ಎಂಬುವವರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಸಂಪತ್ ಅವರಿಗೆ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಸಂಪತ್ ಬಿಜೆಪಿ ಮುಖಂಡ ಬಾಲಚಂದ್ರ ಬೀಳಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment