ಬಾವಗಿ ಕೆರೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ: ಕೆರೆ ಅಭಿವೃದ್ಧಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ..!

ಬೀದರ್: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಬೀದರ್ ಉಪವಿಭಾಗದ ಅಧಿಕಾರಿಗಳು, ಹಾಗೂ ಪ್ರಾದೇಶಿಕ ವಲಯ, ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಬಾವಗಿ ಗ್ರಾಮದ ಕೆರೆಗೆ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿದರು. ಬಾವಗಿ ಕೆರೆ ವೀಕ್ಷಿಸಿ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ಈ ಕೆರೆ ಸುಂದರವಾದ ಕೆರೆಯಾಗಿದೆ. ವಿಶೇಷ ಪ್ರಕೃತಿ ಸೌಂದರ್ಯವನ್ನು ಒಳಗೊಂಡಿದೆ. ಪ್ಲಾಟ್ ಫಾರ್ಮ್ ಚೇರ್, ಹೂವಿನ ಗಿಡಗಳು, ಬೋಟಿಂಗ್ ವ್ಯವಸ್ಥೆ ಮಾಡುವ ಮೂಲಕ ಇದರ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಬಹುದಾಗಿದೆ. ಮನರಂಜನೆ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಇದನ್ನು ಪ್ರವಾಸಿ ತಾಣವನ್ನಾಗಿ ಮಾಡಬಹುದಾಗಿದೆ.ಕೆರೆಯ ಅಭಿವೃದ್ಧಿಗಾಗಿ ನನ್ನ ಅನುಧಾನ ನೀಡಲು ನಾನು ಸಿದ್ದನಿದ್ದೇನೆ ಎಂದರು.ಈ ಕೆರೆಯ ಅಭಿವೃದ್ಧಿಗಾಗಿ ಯೋಜನೆ ರೂಪಿಸಲು ಅರಣ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಇದೇ ವೇಳೆ ಸೂಚಿಸಿದರು. ಆದಷ್ಟು ಬೇಗ ಯೋಜನೆ ರೂಪಿಸುತ್ತೇವೆಂದು ಅಧಿಕಾರಿಗಳು ಹೇಳಿದರು.ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಬೀದರ್ ಉಪವಿಭಾಗದ ಎಇಇ ನಿಸಾರ್ ಅಹಮದ್ ಖುರೇಷಿ, ಅಸಿಸ್ಟೆಂಟ್ ಇಂಜಿನಿಯರ್ ಅನಿಲ್ ಕುಮಾರ್, ಪ್ರಾದೇಶಿಕ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು, ಮುಖಂಡರು ಇದ್ದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment