ಹುಬ್ಬಳ್ಳಿ-ಧಾರವಾಡ

ಉತ್ತರ ಪ್ರದೇಶದದಲ್ಲಿ ನಡೆದ ದಲಿತ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ..!

Published

on

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ಸ್ ಸಮಿತಿ, ಪರಿಶಿಷ್ಟ ಜಾತಿ ಇಲಾಖೆ ಇಂದ ಉತ್ತರ ಪ್ರದೇಶ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಹತ್ಯೆ ಖಂಡಿಸಿ ಪ್ರತಿಭಟನೆಯನ್ನು ನಡೆಸಲಾಯಿತು.ನಗರದ ತಹಶಿಲ್ದಾರರ ಕಛೇರಿ ಎದರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದು ಆಘಾತಕಾರಿ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಅಲ್ಲದೇ ಅತ್ಯಾಚಾರಿಗಳನ್ನು ಮಟ್ಟ ಹಾಕುವಲ್ಲಿ ಯೋಗಿ ಅದಿತ್ಯನಾಥ ಸರ್ಕಾರ ವಿಫಲವಾಗಿದೆ. ಯುಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ.ಹಾಗಾಗಿ ಕೂಡಲೇ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ನೀಡಬೇಕು ಮತ್ತು’ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜೀನಾಮೆ ನೀಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ತಹಶಿಲ್ದಾರರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅನಿಲಕುಮಾರ್ ಪಾಟೀಲ್, ಸದಾನಂದ ಡಂಗನವರ, ಜಕಪ್ಪನವರ, ಶಾಕಿರ ಸನದಿ, ಮೋಹನ್ ಹಿರೇಮನಿ, ಇತರರು ಭಾಗಿಯಾಗಿದ್ದರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version