ಯು.ಪಿ ಆತ್ಯಾಚಾರ ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ..!

ತಿಪಟೂರು: ಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ,ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ಮಾದಿಗ ದಂಡೊರ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾದಿಗ ದಂಡೊರ ಜಿಲ್ಲಾಧ್ಯಕ್ಷ ಈಚನೂರು ಮಹದೇವ್ ‘ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮಾರಕವಾಗಿದೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿ ಮನೀಷ ವಾಲ್ಮೀಕಿ ಮೇಲೆ ಆತ್ಯಾಚಾರ ನಡೆಸಿರುವ ಆರೋಪಿಗಳಿಗೆ ಶಿಕ್ಷೆ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ.ಈ ದಲಿತ ಹೆಣ್ಣು ಮಗಳ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಉತ್ತರ ಪ್ರದೇಶದಲ್ಲಿ ದಲಿತರು, ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು ಪ್ರತಿದಿನ ದಲಿತ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿವೆ .ಉತ್ತರ ಪ್ರದೇಶದಲ್ಲಿ ಸಂವಿಧಾನ ವಿರೋದಿ ಆಡಳಿತ ನಡೆಯುತ್ತಿದ್ದು ಶ್ರೀ ಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದ್ದು ರಾಷ್ಟ್ರಪತಿಗಳು ಕೂಡಲೇ ಯು.ಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರದಿ-ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Please follow and like us:

Related posts

Leave a Comment