ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೇಡೆ ಮುಗಿಲುಮುಟ್ಟಿದ ಆಕ್ರೋಶ.!

ಹುಬ್ಬಳ್ಳಿ: ಹಾತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಜಯ ಕರ್ನಾಟಕ ಸಂಘಟನೆ ಯುಪಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರುವಂತೆ ಆಗ್ರಹಿಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸದ ಪ್ರತಿಭಟನಾಕಾರರು, ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ತಹಶಿಲ್ದಾರರ ಅವರ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದರು. ಉತ್ತರ ಪ್ರದೇಶದ ಪೊಲೀಸರು, ಅಪರಾಧಗಳನ್ನು ಮರೆಮಾಚಲು ಪ್ರಕರಣದ ಸಾಕ್ಷ್ಯಗಳನ್ನು ಅಳಿಸುತ್ತಿದ್ದಾರೆ. ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣವನ್ನು ಇತರೆ ರಾಜ್ಯದ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ ನೀಡಬೇಕು. ಉತ್ತರ ಪ್ರದೇಶ ಸರ್ಕಾರವು ಸಂತ್ರಸ್ತೆ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಮಾರುತಿ ಬಾರಕೇರ, ಅಭಿಷೇಕ ಇಜಾರಿ, ಮಂಜುನಾಥ ಬಾರಕೇರ, ಗಣೇಶ್ ಕಿರುವತ್ತಿ, ವಿಶಾಲ, ಮಂಜುನಾಥ ಕೊರವರ, ಸದ್ದಾಂ ನದಾಫ್ ಸೇರಿದಂತೆ ಮುಂತಾದವರು ಇದ್ದರು.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment