ದ್ವಿಚಕ್ರ ವಾಹನಗಳ ಅಡ್ಡಾದಿಡ್ಡಿ ಸಾಲು- ವ್ಯಾಪರಸ್ಥರು,ಪಾದಾಚಾರಿಗಳಿಂದ ಅಕ್ರೋಶ..!

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ವಾಹನಗಳ ನಿಲುಗಡೆಗೆ ಸರಿಯಾದ ವ್ಯವಸ್ಥೆಯಿಲ್ಲ. ಪುರಸಭೆ, ಸರ್ಕಾರಿ ಆಸ್ಪತ್ರೆ, ತರಕಾರಿ ಮಾರುಕಟ್ಟೆ, ತಾಲೂಕು ಪಂಚಾಯಿತಿ ಹೀಗೆ ಎಲ್ಲಾ ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿಯೇ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಪಾದಚಾರಿಗಳು ಪರದಾಡುವಂತಾಗಿದೆ.ಇನ್ನು ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆ ತಾಂಡವಾಡುತ್ತಿದ್ದು, ಇದನ್ನು ಬಗೆ ಹರಿಸಲು ತಾಲೂಕು ಆಡಳಿತವಾಗಲಿ ಇಲ್ಲವೇ ಪುರಸಭೆ ಅಧಿಕಾರಿಗಳಾಗಲಿ ಮುತುವರ್ಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅತೀ ಹೆಚ್ಚು ವ್ಯಾಪಾರ-ವಹಿವಾಟು ನಡೆಯುವ ಪಟ್ಟಣದ ಹೃದಯ ಭಾಗವಾದ ಗಡಿಯಾರ ಚೌಕ್ ರಸ್ತೆ,ಅಂಚೆ ಕಚೇರಿ ರಸ್ತೆ, ಹೊಸ ಬಸ್ಸ್ಟ್ಯಾಂಡ್ ರಸ್ತೆಗಳ ಎರಡು ಬದಿಗಳಲ್ಲೂ ದ್ವಿಚಕ್ರ ವಾಹನಗಳದ್ದೆ ಕಾರುಬಾರಾಗಿದೆ. ಇದಕ್ಕೆಲ್ಲಾ ಕಡಿವಾಣ ಹಾಕಿ ವ್ಯಾಪಾರಸ್ತರಿಗೆ, ಪಾದಚಾರಿಗಳಿಗೆ ಅನುಕೂಲ ಮಾಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕಿದೆ.

ವರದಿ- ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Please follow and like us:

Related posts

Leave a Comment