ಕಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ..!

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಸದ್ಯ ತಮಿಳು,ತೆಲುಗು ಚಿತ್ರಗಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ಕನ್ನಡದಲ್ಲಿ ಅವಕಾಶಗಳೂ ಕಡಿಮೆಯಾದಾಗ ರಶ್ಮಿಕಾರನ್ನಾ ಅರಸಿ ಬಂದಿದ್ದು ತಮಿಳು-ತೆಲುಗು ಚಿತ್ರರಂಗ. ಸದ್ಯಕ್ಕೆ ಅಲ್ಲಿ ಒಂದರ ಮೇಲೊಂದರಂತೆ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡ್ತಾಯೀರೋ ರಶ್ಮಿಕಾ ಈಗಾ ಕಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ತಮಿಳು ನಟ ಕಾರ್ತಿ ಜೊತೆ ಸುಲ್ತಾನ್ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ಕಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ವರ್ಷ ಆರಂಭವಾಗಿದ್ದ ಈ ಚಿತ್ರದ ಶೂಟಿಂಗ್ ಕೊರೊನಾದಿಂದಾಗಿ ಸ್ಥಗಿತಗೊಂಡಿತ್ತು. ಆದರೆ ಲಾಕ್ಡೌನ್ ಅನ್ಲಾಕ್ ಆಗಿದ್ದರಿಂದ ಕೊನೆಗೂ ಚಿತ್ರೀಕರಣ ಮುಗಿದಿದೆ. ಇದರ ಬಗ್ಗೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಖುಷಿ ಹಂಚಿಕೊಂಡಿದ್ದಾರೆ. ಈ ಸಿನಿಮಾವನ್ನು ರೆಮೊ ಸಿನಿಮಾ ಖ್ಯಾತಿಯ ನಿರ್ದೇಶಕ ಬಕ್ಕಿಯಾರಾಜ್ ಕಣ್ಣನ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯೋಗಿಬಾಬು, ಪೊಣ್ಣಂಬಾಲನ್ ನಟಿಸಿದ್ದಾರೆ. ವಿವೇಕ್ ಮತ್ತು ಮರ್ವಿನ್ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment