ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇರೆಯವರ ಖಾತೆಗೆ ಹಣ ವರ್ಗಾವಣೆ:

ಲಿಂಗಸೂಗೂರು: ಆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿದವರ ಖಾತೆಗೆ ಹಣ ಜಮಾವಣೆ ಆಗುವ ಬದಲು ಬೇರೆಯವರ ಖಾತೆಗೆ ತಾವು ದುಡಿದ ಹಣ ಜಮಾವಣೆಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 50-60 ಕುಟುಂಬಗಳು ಆತಂಕದಲ್ಲಿವೆ. ರಾಯಚೂರು ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾ.ಪಂ.ಪಿಡಿಒ ಹಾಗೂ ಕಂಪ್ಯೂಟರ್ ಆಪರೇಟರ್ ನಿರ್ಲಕ್ಷದಿಂದಾಗಿ ಕೂಲಿ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ. ತಾವು ದುಡಿದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿರುವದಕ್ಕೆ ಅಧಿಕಾರಿಗಳ ವಿರುದ್ಧ ಹಿಡೀ ಶಾಪ ಹಾಕುತ್ತಿದ್ದಾರೆ. ಕೂಲಿ ಕೆಲಸ ಮಾಡುವವರಿಗೆ ಸರಿಯಾಗಿ ಜಾಬ್ ಕಾರ್ಡ್ ನೀಡುತ್ತಿಲ್ಲಾ. ಆಧಾರ್ ಕಾರ್ಡ್ ಬೇರೆಯವರ ಖಾತೆಗೆ ಹಣ ಜಮಾ ಆಗುವಂತೆ ಮಾಡಿದ್ದಾರೆ. ಈ ಬಗ್ಗೆ ಗ್ರಾಮದ ಕೂಲಿ ಕಾರ್ಮಿಕರು ಅನೇಕ ಬಾರಿ ಪಿಡಿಒ ಹಾಗೂ ಕಂಪ್ಯೂಟರ್ ಆಪರೇಟರ್ ಗಮನಕ್ಕೆ ತಂದರೆ ಬೇಜವಾಬ್ದಾರಿ ಉತ್ತರ ಕೊಟ್ಟು ಕಳುಹಿಸುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಯುವ ಜನರಂಗ ಸಂಘಟನೆಯ ನೇತೃತ್ವದಲ್ಲಿ ಕೂಲಿಕಾರ್ಮಿಕರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Please follow and like us:

Related posts

Leave a Comment