ಯು.ಪಿ ಆತ್ಯಾಚಾರ ಖಂಡಿಸಿ ದಲಿತ ಪ್ರಗತಿಪರ ಸಂಘದಿಂದ ಅರೆಬೆತ್ತಲೆ ಮೆರವಣಿಗೆ..!

ತಿಪಟೂರು: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಅರೆಬೆತ್ತಲೆ ಪಂಜಿನ ಮೆರವಣಿಗೆಯನ್ನು ತಿಪಟೂರಿನ ನಗರಸಭೆ ವೃತ್ತದಲ್ಲಿ ಮಾಡಲಾಯಿತು. ನಗರಸಭೆ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಇನ್ನು ಪ್ರತಿಭಟನಾಕಾರರು ಬಿ.ಹೆಚ್ ರಸ್ತೆ ಮೂಲಕ ಸಾಗಿ ಡಾ//ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಗ್ರೇಡ್ 2 ತಹಸೀಲ್ದಾರ್ ಯಶವಂತ್ ರವರಿಗೆ ಮನವಿಪತ್ರಸಲ್ಲಿಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಆತ್ಯಾಚಾರಿಗಳ ಪರ ಸರ್ಕಾರಗಳು ವಕಾಲತ್ತು ವಹಿಸುತ್ತಿವೆ, ರಾಮನ ಹೆಸರಿನಲ್ಲಿ ಅಧಿಕಾರ ಹಿಡಿದ ಬಿ.ಜೆ.ಪಿ ರಾವಣನ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ವರದಿ- ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Please follow and like us:

Related posts

Leave a Comment