ಜಗಳದಿಂದಾ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!

ಆನೇಕಲ್ : ಜಗಳದಿಂದಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಯಾರಂಡಳ್ಳಿಯಲ್ಲಿ ನಡೆದಿದೆ. ನಿನ್ನೇ ಸಂಜೆ ವಿಕಾಸ್ ಹಾಗೂ ಪೀಟರ್ ನಡುವೆ ಜಗಳವಾಗಿದೆ, ಇಟ್ಟಿಗೆ ಫ್ಯಾಕ್ಟರಿಯೊಂದರಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಲಿದ್ರೂ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ತೀವ್ರ ವಿಕೋಪಕ್ಕೆ ತಿರುಗಿ ಕೊಪದಲ್ಲಿದ್ದ ಪೀಟರ್ ವಿಕಾಸ್ ಗೆ ತನ್ನ ಬಳಿಯಿದ್ದ ಚೂಪಾದ ಚಾಕುವಿನಿಂದ ಕುತ್ತಿಗೆಯ ಭಾಗಕ್ಕೆ ಇರಿದಿದ್ದಾನೆ,ವಿಕಾಸ್ ತೀವ್ರವಾದ ರಕ್ತಸ್ರಾವದಿಂದ ನೆಲಕ್ಕುರುಳಿ ಸಾವನ್ನಪ್ಪಿದ್ದಾನೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ವರದಿ- ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Please follow and like us:

Related posts

Leave a Comment