ಗುಬ್ಬೇವಾಡ ಗ್ರಾಮದಲ್ಲಿ ರಕ್ತದಾನ ಶಿಬಿರ..

ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಗರಖೇಡ್ ಇವರ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ರಕ್ತದ ಒತ್ತಡ ಹಾಗೂ ಸಕ್ಕರೆ ಕಾಯಿಲೆ ಬಗ್ಗೆ ಉಚಿತವಾಗಿ ತಪಾಸಣೆ ಮಾಡಲಾಯಿತು. ಸುಮಾರು ನೂರು ಜನ ಉಚಿತ ತಪಾಸಣೆಯಲ್ಲಿ ಭಾಗವಹಿಸಿದ್ದು, ವೈದ್ಯಾಧಿಕಾರಿಗಳಾದ ಡಾ. ಅನಿಲ್ ರಾಠೋಡ್, ಎಂಬಿ ತೇಲಿ. ಎಸ್ ಎಸ್ ಅಂಕಲಗಿ, ಸೇರಿದಂತೆ ಗ್ರಾಮದ ಅನೇಕ ಜನರು ಕೂಡ ಉಪಸ್ಥಿತರಿದ್ದರು.

ವರದಿ: ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ

Please follow and like us:

Related posts

Leave a Comment