ಮಂಡ್ಯ

ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ಸರ್ಕಾರ ಮೀನಾಮೇಷಾ- ಫೂರ್ಣಚಂದ್ರ ಆಕ್ರೋಶ..!

Published

on

ಮಳವಳ್ಳಿ: ಡಾ.ಸರೋಜನಿ ಮಹಿಷಿ ವರದಿ ಮತ್ತು ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಹಾಗೂ ರಾಮನಗರ ಜಿಲ್ಲೆಯಲ್ಲಿ ಹೇಮಲತಾ ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ಸಂಘದಿಂದ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆ ಕರ್ನಾಟಕ ತಾಲ್ಲೂಕು ಅಧ್ಯಕ್ಷ ಫೂರ್ಣಚಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾಯಿತು.ಇನ್ನೂ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಮಾತನಾಡಿ, ರಾಜ್ಯದಲ್ಲಿ ಡಾ. ಸರೋಜನಿ ಮಹಿಷಿ ವರದಿಯನ್ನು ಜಾರಿಗೆ ತರಲು ಆಡಳಿತಕ್ಕೆ ಬಂದ ಸರ್ಕಾರಗಳು ಏಕೆ ಮೀನಾವೇಷ ಏಣಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ,ಇದಲ್ಲದೆ ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ರವರು ನಾನು ಮುಖ್ಯಮಂತ್ರಿಯಾದರೆ ಡಾ.ಸರೋಜನಿ ಮಹಿಷಿ ವರದಿಯನ್ನು ಜಾರಿಗೆ ತರುತ್ತೇನೆ ಎಂದು ಹೇಳಿದ್ದರು. ಇದುವರೆಗೂ ಜಾರಿಗೆ ತರದೆ ಇರುವುದು ಖಂಡನೀಯ ಕೂಡಲೇ ವರದಿಯನ್ನು ನವೆಂಬರ್ 1 ರಂದು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಇನ್ನೂ ರಾಮನಗರ ಜಿಲ್ಲೆಯಲ್ಲಿ ಹೇಮಲತಾ ಹತ್ಯೆಯನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಇನ್ನೂ ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಂದಾನಿ, ಜಿಲ್ಲಾಮುಖಂಡರಾದ ಮಂಜು, ರಮೇಶ ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version