ಮಳವಳ್ಳಿಯ ನೂತನ ಅಧ್ಯಕ್ಷರಾಗಿ ಪುಟ್ಟಸ್ವಾಮಿ ಅಧಿಕಾರ ಸ್ವೀಕಾರ..!

ಮಳವಳ್ಳಿ: ಮಳವಳ್ಳಿ ತಾಲ್ಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪುಟ್ಟಸ್ವಾಮಿರವರು ಇಂದು ಕಚೇರಿಯಲ್ಲಿ ಗಣಪತಿ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿರುವ ಅಧ್ಯಕ್ಷರ ಕೊಠಡಿಯಲ್ಲಿ ಗಣಪತಿ ಫೂಜೆ ಸಲ್ಲಿಸಿ ಬಳಿಕ ಕುರ್ಚಿಗೆ ನಮಸ್ಕಾರ ಮಾಡಿ ಕುರ್ಚಿಯನ್ನು ಅಲಂಕರಿಸಿದ್ದರು. ಇನ್ನೂ ಇದೇವೇಳೆ ತಾ.ಪಂ ಇಓ ಸತೀಶ್ ಹಾಗೂ ಮಾಜಿ ಅಧ್ಯಕ್ಷ ಪ್ರಕಾಶ್, ಮಹದೇವ ಹಾಗೂ ತಾ.ಪಂ ಕಚೇರಿಯ ಸಿಬ್ಬಂದಿಗಳು ಸೇರಿದಂತೆ ಅನೇಕರು ಶುಭ ಕೋರಿದರು. ಬಳಿಕ ನೂತನ ಅಧ್ಯಕ್ಷ ಪುಟ್ಟಸ್ವಾಮಿ ರವರು ವಾಹಿನಿಯೊಂದಿಗೆ ಮಾತನಾಡಿ, ಇಂದು ಅಧಿಕಾರ ಸ್ವೀಕರಿಸುತ್ತಿದ್ದು ಇನ್ನೂ 8 ತಿಂಗಳು ಅವಧಿವಿದ್ದು, ತಾಲ್ಲೂಕಿನ 39 ಗ್ರಾ.ಪಂಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತೇನೆ ಹಾಗೂ ಹೆಚ್ಚು ತಾಲ್ಲೂಕು ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದ್ದು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕು ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment