ಗದ್ದೆಯಂತಾದ ತೊರಣದಿನ್ನಿ ರಸ್ತೆ-ವಾಹನ ಸವಾರರ ಪರದಾಟ..!

ಮಸ್ಕಿ: ಕಳೆದ ಎರಡು ದಿನಗಳಿಂದ ಮಳೆಗೆ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥೀತಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು ರಸ್ತೆಗಳು ಸಂಪೂರ್ಣ ಹಾಳಾಗಿವೆ. ಸ್ಥಳೀಯ ಸಂಸ್ಥೆಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಮಳೆ ನೀರು ರಸ್ತೆಗೆ ಹರಿಯುತ್ತಿದ್ದು ಇದರಿಂದ ಸಾರ್ವಜನಿಕರು ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ. ರಸ್ತೆಗಳು ಮಳೆಗೆ ಮತ್ತಷ್ಟು ಕೆಸರು ಗದ್ದೆಯಂತಾಗಿ ವಾಹನಗಳು, ಜನರು ರಸ್ತೆ ದಾಟಲು ಪರದಾಡುತ್ತಿದ್ದಾರೆ.ರಸ್ತೆ ಗುಂಡಿಗಳಲ್ಲಿ ನೀರು ನಿಂತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಜನ ದಿನ ದೂಡುತ್ತಿದ್ದಾರೆ. ಮೊದಲೇ ಕಿಲ್ಲರ್ ಕೊರೋನದಿಂದ ಬಳಲಿ ಬೆಂಡಾಗಿರುವ ಜನಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಈಗಲಾದರೂ ಸಂಬಂಧ ಪಟ್ಟ ಅಧಕಾರಿಗಳು ರಸ್ತೆ ಸರಿಮಾಡಿ ವಾಹನ ಸವಾರರಿಗೆ ಮತ್ತು ಸಾರ್ವಜನಕರಿಗೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರ ಒತ್ತಾಯವಾಗಿದೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Please follow and like us:

Related posts

Leave a Comment