“ಉತ್ತರ ಪ್ರದೇಶದ ಹತ್ರಾಸ್ ನ ಅತ್ಯಾಚಾರ ಮತ್ತು ರೈತ ವಿರೋಧಿ ಕಾಯ್ದೆಗಳ ವಿರುದ್ದ ಪ್ರತಿಭಟನೆ..!

ಬಳ್ಳಾರಿ: AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ನ ಅತ್ಯಾಚಾರ ಮತ್ತು ರೈತ ವಿರೋಧಿ ಕಾಯ್ದೆಗಳ ವಿರುದ್ದ ಇಂದು ಬಳ್ಳಾರಿಯಲ್ಲಿರುವ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಮಾಡಲಾಯಿತು. ಅತ್ಯಾಚಾರಿಗಳಿಗೆ ಅತ್ಯುಗ್ರ ಶಿಕ್ಷೆಯಾಗಬೇಕು ಮತ್ತು ರೈತ ವಿರೋಧಿ ಕಾಯ್ದೆ ಗಳನ್ನು ಸರಕಾರ ಹಿಂಪಡೆಯಬೇಕು ಎಂದು AIDSO ಜಿಲ್ಲಾಧ್ಯಕ್ಷ ಸುರೇಶ್.ಜಿ ಮಾತನಾಡಿ ಸಂಘಟನೆಯ ಎಲ್ಲಾ ಸದಸ್ಯರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ರವಿ ಕಿರಣ್ ಮಾತನಾಡಿ ರೈತ- ಕಾರ್ಮಿಕ ಕಾಯ್ದೆ ಗಳನ್ನು ಸರ್ಕಾರ ಜಾರಿಗೆ ತರುತ್ತಿರುವುದು ಜನ ವಿರೋಧಿ ಯಾಗಿದೆ ಎಂದರು. ಸರ್ಕಾರ ಎಲ್ಲಾ ಕಾಯ್ದೆ ಗಳನ್ನು ರದ್ದು ಮಾಡಿ. ಜನಕಲ್ಯಾಣಕ್ಕೆ ಅನುಕೂಲವಾಗುವ ಕಾಯ್ದೆಗಳನ್ನು ಜಾರಿಗೆ ತರಬೇಕು. ಇದು ಹೀಗೆ ಮುಂದುವರಿದರೆ ಮುಂದಿನ ದಿನಮಾನಗಳಲ್ಲಿ ಅತ್ಯುಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರದ ವಿರುದ್ದ ಘೋಷಣೆ ಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಸೆಕ್ರೆಟರಿಯೇಟ್ ಕೆ.ಈರಣ್ಣ, ಎಂ ಶಾಂತಿ, ಸಿದ್ದು, ಶೇಖರ್ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

ವರದಿ-ವೆಂಕಟೇಶ್.ಯು ಎಕ್ಸ್ ಪ್ರೆಸ್ ಟಿವಿ ಬಳ್ಳಾರಿ

Please follow and like us:

Related posts

Leave a Comment