ಅಲಬನೂರು ಸೇತುವೆ ಮುಳುಗಡೆ- ಗ್ರಾಮಸ್ಥರ ಪರದಾಟ….!

ಸಿಂಧನೂರು: ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದಿಂದ ದಡೇಸ್ಗೂರು ಗ್ರಾಮಕ್ಕೆ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು.ಸಂಚಾರಕ್ಕೆ ಅನುಕೂಲಕ್ಕೆ ಅನುಗುಣವಾಗಿ ತಾತ್ಕಾಲಿಕವಾಗಿ ಪಕ್ಕದಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಕಳೆದ ಎರಡೂ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಸೇತುವೆ ಮುಳುಗಡೆ ಯಾಗಿದ್ದು.ವಾಹನಗಳು ಹೋಗದಂತೆ ಸೇತುವೆಯ ಎರಡೂ ಕಡೆಯಲ್ಲೂ ಅಡ್ಡವಾಗಿ ವಾಹನಗಳನ್ನು ನಿಲ್ಲಿಸಲಾಗಿದೆ. ಅಲಬನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ವ್ಯಾಪಾರ ವಹಿವಾಟು ನಡೆಸಲು ತಾಲೂಕು ಕೇಂದ್ರಕ್ಕೆ ಬಾರದೆ ಸಿರುಗುಪ್ಪಕ್ಕೆ ಹತ್ತಿರವಾಗುವ ಕಾರಣದಿಂದ ಈ ಮಾರ್ಗವಾಗಿ ತೆರಳುತ್ತಾರೆ.ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟಬೇಕಾದ ಅನಿವಾರ್ಯತೆ ಉಂಟಾಗಿದೆ. ಕಳೆದ ಹಲವು ವರ್ಷಗಳಿಂದ ಆಮೆ ಗತಿಯಲ್ಲಿ ನಡೆಯುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯಿಂದ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವಲ್ಲಿ ಶಾಸಕರು, ಹಾಗೂ ಅಧಿಕಾರಿಗಳು ಗಮನಿಸಿಬೇಕು. ಆದರೆ ಅವರು ನಿರ್ಲಕ್ಷ್ಯ ವಹಿಸಿದ ಕಾರಣ ಪ್ರತಿ ಸಲ ಮಳೆ ಬಂದಾಗ ಅಲಬನೂರು ಗ್ರಾಮದಿಂದ ದಡೇಸ್ಗೂರು ಸಂಪರ್ಕಿಸುವ ಈ ಹಳ್ಳ ದಾಟಲು ಜನರು ಪ್ರಾಣವನ್ನೇ ಪಣಕ್ಕೆ ಇಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment