ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿಗಳಿಗೆ ಗುದ್ದಲಿ ಪೂಜೆ- ಶಾಸಕ ಹರ್ಷವರ್ಧನ್..!

ನಂಜನಗೂಡು: ನಂಜನಗೂಡು ಪಟ್ಟಣದ ಶ್ರೀರಾಂಪುರ ಬಡಾವಣೆಯಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಹಾಗೂ ಚಾಮಲಾಪುರ ಬೀದಿಯಲ್ಲಿ 17 ಲಕ್ಷ ರೂ ನಾಯಕ ಭವನ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಂತರ ಮಾತನಾಡಿದ ಶಾಸಕ ಹರ್ಷವರ್ಧನ್ ತಾಲೂಕಿನಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿ ಶೇಕಡ 80ರಷ್ಟು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದೆ. ಬಿಜೆಪಿ ಸರ್ಕಾರ ಐದು ವರ್ಷಗಳು ಪೂರ್ಣಗೊಳ್ಳುವ ತನಕ ಇನ್ನು ಹೆಚ್ಚಿನ ರೀತಿಯಲ್ಲಿ ತಾಲೂಕನ್ನ ಅಭಿವೃದ್ಧಿಪಡಿಸುವುದು ನನ್ನ ಗುರಿಯಾಗಿದೆ ಅಭಿವೃದ್ಧಿ ಕೆಲಸಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬೇಡ ನಾವೆಲ್ಲ ಒಂದೇ ಮನೆಯವರು ಇದ್ದಹಾಗೆ ಏನಾದರೂ ಸಮಸ್ಯೆ ಇದ್ದಲ್ಲಿ ಬಗೆಹರಿಸಿಕೊಳ್ಳೋಣ ಎಂದರು. ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನೋಡಿ ತಾವುಗಳು ಯಾವಾಗಲೂ ನಮಗೆ ಸಹಕಾರ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಕರಿಬಸವಯ್ಯ ನಗರಸಭಾ ಸದಸ್ಯರುಗಳು ಮತ್ತು ಪಕ್ಷದ ಮುಖಂಡರುಗಳು ಸಂದರ್ಭದಲ್ಲಿ ಹಾಜರಿದ್ದರು.

ವರದಿ-ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Please follow and like us:

Related posts

Leave a Comment