ಭಾರಿ ಮಳೆಯಿಂದಾಗಿ ಶೀಲಹಳ್ಳಿ ಸೇತುವೆ ಮುಳುಗಡೆ..!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಆಲಮಟ್ಟಿ, ಘಟಪ್ರಭ, ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆ ಬಿದ್ದಿದ್ದರಿಂದ ನಾರಾಯಣಪುರ ಅಣೆಕಟ್ಟೆಗೆ 1.70 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಕಾರಣ ನಾರಾಯಣಪುರ ಅಣೆಕಟ್ಟೆಯ 22 ಕ್ರಸ್ಟ್ ಗೇಟ್ಗಳ ಮೂಲಕ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಹರಿಬಿಡಲಾಗಿದೆ. ನದಿ ಪಾತ್ರದ ಜನತೆ, ಜಾನುವಾರುಗಳ ಸುರಕ್ಷತೆಗೆ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರಾಯಚೂರು, ಯಾದಗಿರಿ ಜಿಲ್ಲೆಯ ನಡುಗಡ್ಡೆ ಜನತೆ ಬಹುತೇಕವಾಗಿ ಬಾಹ್ಯ ಸಂಪರ್ಕ ಕಳೆದುಕೊಂಡಿದ್ದಾರೆ. ಶೀಲಹಳ್ಳಿ ಸೇತುವೆ ಮುಳುಗಡೆ ಆಗಿದ್ದು, ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಸೇರಿದಂತೆ ನಡುಗಡ್ಡೆ ಪ್ರದೇಶದ ಜನತೆ ತಾಲೂಕು ಮತ್ತು ಜಿಲ್ಲಾ ಕೇಂದ್ರದ ಸಂಪರ್ಕ ಕಳೆದುಕೊಂಡು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು

Please follow and like us:

Related posts

Leave a Comment