ಕೋರ್ಟ್ ಆವರಣದ ಮುಂದೆ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ..!

ಅರಕಲಗೂಡು: ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ.ಸಾಮಾಜಿಕ ಅಂತಾರ ಕಾಪಾಡಿಕೊಂಡು ಕೊರೋನಾ ವೈರಸ್ ಹರಡದಂತೆ ತಡೆಗಟ್ಟಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮುಜಫರ್ ಹೇಳಿದರು. ಪಟ್ಟಣದ ಕೋರ್ಟ್ ಆವರಣದ ಮುಂದೆ ಇಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮುಜಫರ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ , ತಾಲ್ಲೂಕು ನ್ಯಾಯವಾದಿಗಳ ಸಂಘ ಹಾಗೂ ತಾಲೂಕು ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತಿ ಇವರ ಸಂಯುಕ್ತ ಆಶ್ರಯದಲ್ಲಿ ಕೊರೊನಾ ಜಾಗೃತಿ ಜಾತ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಪ್ರತಿಜ್ಞಾವಿಧಿ ಬೋಧಿಸಿ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮುಜಫರ್ ರವರು.ಸಾರ್ವಜನಿಕರು ಕೋವಿಡ್-19 ರಿಂದ ಯಾವ ರೀತಿ ಮುಕ್ತರಾಗಬೇಕು ಎಂಬ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಜಾತ ಹಮ್ಮಿಕೊಳ್ಳಲಾಗಿದೆ. ಜನರು ಮಾಸ್ಕ್, ಸ್ಯಾನಿಟೈಸರ್ ಬಳಸಿ ಸಾಮಾಜಿಕ ಅಂತಾರ ಕಾಪಾಡಿಕೊಂಡು ಕೊರೋನ ವೈರಸ್ ಹರಡದಂತೆ ತಡೆಗಟ್ಟಿ ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ನಟರಾಜ್ ಜನರ್ಧನ್ ಗುಪ್ತ, ಶಂಕ್ರಯ್ಯ , ರವಿಕುಮಾರ್ , ಮತ್ತು ನ್ಯಾಯಾಲಯದ ನೌಕರರು ಭಾಗಿಯಾಗಿದ್ದರು.

ವರದಿ-ಎ.ಎನ್ ಸಂತೋಷ್ ಎಕ್ಸ್ ಪ್ರೆಸ್ ಟಿವಿ ಅರಕಲಗೂಡು

Please follow and like us:

Related posts

Leave a Comment