ಕೋವಿಡ್ -19 ತಡೆಗಟ್ಟುವಿಕೆಯ ಜನಾಂದೋಲನ ಜಾಥ..!

ಮಳವಳ್ಳಿ: ತಾಲ್ಲೂಕು ಕಾನೂನುಸೇವೆಗಳ ಸಮಿತಿ ಮತ್ತು ವಕೀಲರ ಸಂಘ , ಹಾಗೂ ತಾಲ್ಲೂಕು ಆಡಳಿತ ಮತ್ತು ವಿವಿಧ ಇಲಾಖೆ ವತಿಯಿಂದ ಕೋವಿಡ್ -19.ತಡೆಗಟ್ಟುವಿಕೆಯ ಬಗ್ಗೆ ಜನಾಂದೋಲನ ಜಾಥ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶರಾದ ಕೆ.ಎಂ ರಾಧಕೃಷ್ಣ ರವರು ಹಸಿರು ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಹಿರಿಯ ಸಿವಿಲ್ ನ್ಯಾಯಾದೀಶರಾದ ಕೆ.ಎಂ ರಾಧಕೃಷ್ಣ ಮಾತನಾಡಿ, ಕೋವಿಡ್ 19 ಎಂಬ ಮಹಾಮಾರಿ ಬಗ್ಗೆ ಜನರಲ್ಲಿ ಇನ್ನೂ ಜಾಗೃತಿ ಮೂಡದಿರುವುದರ ವಿಷಾದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಆರೋಗ್ಯ ಇಲಾಖೆ, ಕಂದಾಯ ಇಲಾಖೆ , ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ 19 ವಿರುದ್ದ ಸೈನಿಕರಿಗೆ ಹೋರಾಟ ನಡೆಸುತ್ತಿದ್ದರೂ ಸಾರ್ವಜನಿಕರು ಸ್ವಂದಿಸುತ್ತಿದ್ದು ವಿಷಾದದ ಸಂಗತಿ .ಇನ್ನೂ ಮುಂದೆಯಾದರೂ ಉಚಿತ ಕೋವಿಡ್ ಪರೀಕ್ಷೆ ನಡೆಸುತ್ತಿದ್ದು ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು. ಇನ್ನೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥನಡೆಸಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾದೀಶೆ ಶೆಮೀದಾ, ಹೆಚ್ಚುವರಿ ಸಿವಿಲ್ ನ್ಯಾಯಾದೀಶೆ ಐಶ್ವರ್ಯ ಚಿದಾನಂದ ಪಟ್ಟಣಶೆಟ್ಟಿ, ತಹಸೀಲ್ದಾರ್ ಚಂದ್ರಮೌಳಿ, ಕ್ಷೇತ್ರ ಶಿಕ್ಷಣಾಧಿಕಾರಿ, ಚಿಕ್ಕಸ್ವಾಮಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ಡಿವೈಎಸ್ ಪಿ ಪೃಥ್ವಿ, ಪಟ್ಟಣದ ಇನ್ಸ್ ಪೆಕ್ಟರ್ ರಾಜೇಶ್, ಮುಖ್ಯಾಧಿಕಾರಿ ಗಂಗಾದರ್, ಸಿಡಿಪಿಓ ಕುಮಾರ್ ಸೇರಿದಂತೆ ಮತ್ತಿತ್ತರರು ಭಾಗಿಯಾಗಿದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment