ಜನರ ರಕ್ಷಣೆಯಲ್ಲಿ ಎನ್.ಡಿ ಆರ್.ಎಪ್.ತಾಂಡ..!

ಶಹಾಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಭೀಮಾನದಿಗೆ ಹೆಚ್ಚಿನ ನೀರು ಹರಿ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ನದಿಯ ತಟದಲ್ಲಿರುವ ರೋಜಾ, ಹೊಸುರು, ಹುರಸ, ಗುಂಡಗಿ ಗ್ರಾಮಗಳು ಜಲಾವೃತಗೊಂಡು ಸಂಪೂರ್ಣ ಮುಳುಗಡೆಯಾಗಿವೆ. ನದಿಯ ತಟದ ಗ್ರಾಮಗಳಲ್ಲಿ NDRF ತಂಡ ಕಳೆದೆರಡು ದಿನಗಳಿಂದ ಬೀಡುಬಿಟ್ಟಿದ್ದು, ನೀರಿನಲ್ಲಿ ಸಿಲುಕಿದ ಜನರನ್ನು ರಕ್ಷಣೆ ಮಾಡಲಾಗುತ್ತಿದೆ ಅಲ್ಲದೆ ಇನ್ನೂ ರಕ್ಷಣಾ ಕಾರ್ಯಮುಂದುವರಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 50 ಹೆಚ್ಚಿನ ಜನರನ್ನು ರಕ್ಷಣೆ ಮಾಡಿ ಸುರಕ್ಷಿತವಾದ ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ. ಸರಕಾರಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಗ್ರಾಮದ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.ಇದಕ್ಕೆ ರಾತ್ರಿಯಿಡೀ ಪೋಲಿಸರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾಥ ನೀಡುತ್ತಿದ್ದಾರೆ.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment