ಹದಗೆಟ್ಟ ಹಯ್ಯಾಳ, ಗೊಂದೆನೂರ ರಸ್ತೆ…!

ಶಹಾಪುರ : ತಾಲ್ಲೂಕಿನ ಹಯ್ಯಾಳ ಹಾಗೂ ಗೊಂದೆನೂರ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿದೆ ಎಂದು ಕಲ್ಯಾಣ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಭೀಮಾಶಂಕರ ಕಟ್ಟಿಮನಿ ಆರೋಪಿಸಿದ್ದಾರೆ. ಸರ್ಕಾರ ಕೋಟ್ಯಂತರ ರೂಪಾಯಿ ರಸ್ತೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಖರ್ಚು ಮಾಡುತ್ತಿದೆ ಆದರೆ ಇಲ್ಲಿ ಗುತ್ತೆದಾರರು ತಮ್ಮ ಆಡಿದ್ದೇ ಆಟ, ಬಂದ ಅನುದಾನ ಜನಪ್ರತಿನಿಧಿಗಳು ಜೇಬಿಗಿಳಿಸಿದ್ದಾರೆ ಎಂದು ನೇರವಾಗಿ ಖಾರವಾಗಿ ನುಡಿದರು. ಈ ರಸ್ತೆಯ ಮೇಲೆ ನೂರಾರು ವಾಹನಗಳು ಸಂಚರಿಸುವುದರಿಂದ ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತಿದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವರದಿ- ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment