ಕುಡಿದು ವಾಹನ ಚಾಲನೆ- ಸರಣಿ ಅಪಘಾತ..!

ಆನೇಕಲ್: ಲಾರಿ ಚಾಲಕ ಕುಡಿದು ವಾಹನ ಚಾಲನೆ ಮಾಡಿದ ಪರಿಣಾಮ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಬೆಂಗಳೂರು ಹೊರವಲಯ ಅತ್ತಿಬೆಲೆ ಟೋಲ್ ಬಳಿ ನಡೆದಿದೆ.ತಮಿಳುನಾಡಿನ ಹೊಸೂರು ಕಡೆಯಿಂದ ಬೆಂಗಳೂರು ಕಡೆಯ ಮಾರ್ಗವಾಗಿ ಬರುವಾಗ ಅತ್ತಿಬೆಲೆಯ ಟೋಲ್ ಬಳಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು ಮುಂಭಾಗದಲ್ಲಿದ್ದ ಏಳು ಕಾರುಗಳು ಸಂಪೂರ್ಣ ಜಖಂ ಗೊಂಡಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೂ ಸರಣಿ ಅಪಘಾತಕ್ಕೆ ಲಾರಿ ಚಾಲಕ ಮದ್ಯ ಸೇವಿಸಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಿಂದ ಕೆಲ ಕಾಲ ಅತ್ತಿಬೆಲೆ ಟೋಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸುವಂತಾಯಿತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅತ್ತಿಬೆಲೆ ಪೋಲಿಸರು ಅಪಘಾತವಾಗಿದ್ದ ವಾಹನಗಳನ್ನು ಟೋಲ್ ರಸ್ತೆಯಿಂದ ತೆರವು ಗೊಳಿಸಿ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನೆ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದ ಅತ್ತಿಬೆಲೆ ಪೋಲಿಸರು ಪ್ರಕರಣ ಸಂಬಂಧ ದೂರು ದಾಖಲು ಮಾಡಿಕೊಂಡಿದ್ದಾರೆ.

ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Please follow and like us:

Related posts

Leave a Comment