ಮಂಡ್ಯ

ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಣೆ ಮಾಡಲು ನಿರ್ಧಾರ-ಮಳವಳ್ಳಿ

Published

on

ಮಳವಳ್ಳಿ: ಮಳವಳ್ಳಿ ತಾಲ್ಲೂಕು ಆಡಳಿತವತಿಯಿಂದ ನ 1 ರಂದು ನಡೆಯಲಿರುವ 65 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮೆರವಣಿಗೆವಿಲ್ಲದೆ ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.ಮಳವಳ್ಳಿ ಪಟ್ಟಣದ ಮಿನಿ ವಿಧಾನಸೌದದ ಸಂಕೀರ್ಣ ಕಟ್ಟಡದಲ್ಲಿ ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಮೌಳಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಆಗಮಿಸಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಚಂದ್ರಮೌಳಿ ತಿಳಿಸಿದರು. ಇದಲ್ಲದೆ ಎಲ್ಲಾ ಇಲಾಖೆಯಲ್ಲೂ ವಿದ್ಯುತ್ ಅಲಂಕಾರದಿಂದ ಕೂಡಿರಬೇಕು, ಕನ್ನಡ ಮಾದ್ಯಮದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕು ,ಜೊತೆಗೆ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಎಂದು ತೀರ್ಮಾನಿಸಲಾಯಿತು.ಸಭೆಯಲ್ಲಿ ಉಪತಹಸೀಲ್ದಾರ್ ಕುಮಾರ್, ದಿವಾಕರ್, ಲೋಕೋಪಯೋಗಿ ಇಲಾಖೆ ಎಇಇ ಪುಟ್ಟಸ್ವಾಮಿ, ಸೇರಿದಂತೆ ಇಲಾಖಾವಾರು ಅಧಿಕಾರಿಗಳು ಹಾಜರಿದ್ದರು.

ವರದಿ: ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version