ವಾಣಿಜ್ಯನಗರಿಯಲ್ಲಿ ಬೆಳ್ಳಂಬೆಳಿಗ್ಗೆ ಹರಿಯಿತು ನೆತ್ತರು: ಚಾಕು ಇರಿದು ನಿವೃತ್ತ ಪ್ರೊಫೆಸರ್ ಹತ್ಯೆ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಗದಗನ ಕಾನೂನು ಕಾಲೇಜಿನ ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನಿಂದಲೇ ಮಾವನ ಕೊಲೆಯಾಗಿದೆ ಎಂಬುವಂತ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸ್ ತನಿಖೆಯ ಮೂಲಕವೇ ಸತ್ಯ ಬೆಳಕಿಗೆ ಬರಲಿದೆ. ಇತ್ತಿಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಶಂಕ್ರಪ್ಪ ಅವರನ್ನು ಬೆಳ್ಳಂಬೆಳಿಗ್ಗೆ ಕೊಲೆ ಮಾಡಿದ್ದು, ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಮೃತ ವ್ಯಕ್ತಿಯ ಶವ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು,ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment