ಖಾನಾಪೂರ: ಮೈಲಾರ ಮಲ್ಲಣ್ಣಾ ಪಲ್ಲಕ್ಕಿ ಉತ್ಸವ; ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಭಾಗಿ

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪೂರದ ಮೈಲಾರ ಮಲ್ಲಣ್ಣಾ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರು, ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಈಶ್ವರ್ ಖಂಡ್ರೆ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಅವರು ಚಾಲನೆ ನೀಡಿದರು. ನಿನ್ನೆ ರಾತ್ರಿ 11.30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿದ ಈಶ್ವರ್ ಖಂಡ್ರೆ, ಬಂಡೆಪ್ಪ ಖಾಶೆಂಪುರ್ ಅವರು, ಸಾಂಪ್ರದಾಯಿಕ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ವರ್ಷ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಲಾಗಿದೆ. ಕೊರೊನಾ ಹಾವಳಿ ಇಲ್ಲದಿದ್ದರೆ ದೊಡ್ಡಮಟ್ಟದ ಜಾತ್ರೆ ಇಲ್ಲಿ ನಡೆಯುತ್ತಿತ್ತು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡಿದ್ದೇವೆಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಪಂಡಿತ್ ರಾವ್ ಚಿದ್ರಿ, ಮುಜರಾಯಿ ತಹಶಿಲ್ದಾರ ಅನಂತರಾವ್ ಕುಲಕರ್ಣಿ, ಪ್ರಧಾನ ಅರ್ಚಕ ಬಸಪ್ಪ ಹೀರೆವಗ್ಗೆ, ಮುಖಂಡರಾದ ಕೆ.ಡಿ ಗಣೇಶ್, ನಿರಂಜಪ್ಪ ಪಾತ್ರೆ, ಮಲ್ಲಿಕಾರ್ಜುನ ಹೀರೆವಗ್ಗೆ, ಮಾರುತಿರಾವ್ ಪಾಟೀಲ್, ಧನರಾಜ್ ಪಾಟೀಲ್, ರವಿ ದುರ್ಗೆ, ಬಸವರಾಜ್ ಎಡೆ, ಪ್ರಕಾಶ್ ಪಾಟೀಲ್, ರಾಜಕುಮಾರ ಪಾಟೀಲ್, ವಿಶ್ವನಾಥ ಗುಮ್ಮೆ, ದೇವಸ್ಥಾನ ಸಮಿತಿ ಮುಖಂಡರು, ಅರ್ಚಕರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment