ಹಿರಿಯ ಸಾಹಿತಿ ಡಿ.ಎನ್.ಅಕ್ಕಿ ಅವರಿಗೆ ರಾಜ್ಯೋತ್ಸವದ ಗಿರಿ.!

ಶಹಾಪುರ: ರಾಜ್ಯ ಸರ್ಕಾರ 2019 -20 ನೇ ಸಾಲಿಗೆ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದ ಹಿರಿಯ ಸಾಹಿತಿ ಸಂಶೋಧಕ ಶ್ರೀ ಡಿ.ಎನ್. ಅಕ್ಕಿ ಅವರು ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.ಡಿ.ಎನ್.ಅಕ್ಕಿ ಇವರು ಶಿಕ್ಷಕರಾಗಿ, ಸಾಹಿತಿಗಳಾಗಿ, ಸಂಶೋಧಕರಾಗಿ ಸುಮಾರು ಐವತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದು ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಲ್ಲದೆ ಹಲವಾರು ಸಂಶೋಧನಾತ್ಮಕ ಕೃತಿಗಳನ್ನು ಹೊರತಂದಿದ್ದಾರೆ ಇವರ ಸಾಹಿತ್ಯ ಕೃಷಿಯ ಅನುಪಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.ಇಲ್ಲಿವರೆಗೆ ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಇವರ ಸೇವೆ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಅಮೋಘವಾಗಿದೆ.ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸಿದ್ದಲಿಂಗಣ್ಣ ಆನೇಗುಂದಿ, ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ,ಪಂಚಾಕ್ಷರಿ ಹಿರೇಮಠ, ಬಸವರಾಜ ಹಿರೇಮಠ,ಹಿರಿಯ ಸಾಹಿತಿಗಳಾದ ಸಿದ್ಧರಾಮ ಹೊನ್ಕಲ್,ವಿಶ್ವರಾಧ್ಯ ಸತ್ಯಂಪೇಟೆ,ಶಿವಣ್ಣ ಇಜೇರಿ,ಡಾ. ಮೋನಪ್ಪ ಶಿರವಾಳ ದೊಡ್ಡಬಸಪ್ಪ ಬಳೂರಗಿ, ಡಾ.ಅಬ್ದುಲ್ ಕರೀಂ ಕನ್ಯಾಕೋಳೂರ,ಲಿಂಗಣ್ಣ ಪಡಶೆಟ್ಟಿ,ಗೋಗಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲ್, ಹಾಗೂ ಇನ್ನಿತರರು ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ- ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ.

Please follow and like us:

Related posts

Leave a Comment