ಸಣ್ಣ ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗುತ್ತದೆ-ಕೆ.ಮಹದೇವ್

ಪಿರಿಯಾಪಟ್ಟಣ: ಸೂರಿಲ್ಲದ ಕಡುಬಡವರಿಗೆ ಪಟ್ಟಣ ವ್ಯಾಪ್ತಿಯ 20 ಎಕರೆ ಪ್ರದೇಶದಲ್ಲಿ ನಿವೇಶನ ಕಲ್ಪಿಸಿ ಕೊಡಲಾಗುವುದು ಎಂದು ಪಿರಿಯಾಪಟ್ಟಣ ಶಾಸಕ ಕೆ ಮಹದೇವ್ ತಿಳಿಸಿದರು. ಪುರಸಭೆ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸುಮಾರು 1ಕೋಟಿ 60 ಲಕ್ಷ ರೂ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ನಿರುದ್ಯೋಗ ಹೋಗಲಾಡಿಸಲು ಪಟ್ಟಣದಲ್ಲಿ ಸಣ್ಣ ಕೈಗಾರಿಕೆ ಸ್ಥಾಪಿಸಿ 3 ಸಾವಿರ ಯುವಕರಿಗೆ ಉದ್ಯೋಗ ಕಲ್ಪಿಸಿ ಕೊಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಇನ್ನೂ ಮನೆ ಮಾಲಿಕರು ಸಕಾಲದಲ್ಲಿ ಮನೆ ಕಂದಾಯ ಪಾವತಿಸಿ ಪುರಸಭೆ ಅಭಿವೃದ್ಧಿಗೆ ಸಹಕರಿಸಬೇಕು ಎಂದರು ಇನ್ನೂ ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಚಂದ್ರಕುಮಾರ್ ಪುರಸಭಾ ಸದಸ್ಯರು ,ವಿವಿಧ ಇಲಾಖಾ ಅಧಿಕಾರಿಗಳು , ಮತ್ತು ಸಾರ್ವಜನಿಕರು ಹಾಜರಿದ್ದರು.

Please follow and like us:

Related posts

Leave a Comment