ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಪತ್ರ ಸಲ್ಲಿಕೆ..!

ಬಳ್ಳಾರಿ- ಬಳ್ಳಾರಿ ತಾಲೂಕು ಕಛೇರಿ ಆವರಣದಲ್ಲಿ ಕಂದಾಯ ಇಲಾಖೆ, ಉದ್ಯೋಗ ವಿನಿಮಯ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ, ಗ್ರಾಮಾಂತರ ಪೊಲೀಸ್ ಠಾಣೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ತೋಟಗಾರಿಕೆ ಇಲಾಖೆಗಳಿವೆ. ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ಮತ್ತು ವಾಹನ ನಿಲುಗಡೆ ಸ್ಥಳ ಇರುವುದಿಲ್ಲ. ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ತಹಶಿಲ್ದಾರರಾದ ನಾಗರಾಜ.ಯು ಅವರು ಮಾತನಾಡಿ ಆದಷ್ಟು ಬೇಗನೇ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತವೆ ಎಂದು ಮನವಿ ಪತ್ರವನ್ನು ಸ್ವೀಕರಿಸಿದರು. ಮಾಹಾನಗರ ಪಾಲಿಕೆಯ ಕಛೇರಿ ನಿರ್ವಾಹಕರಾದ ಗೋವಿಂದ ಬಾಬು ಅವರಿಗೂ ಮನವಿ ಪತ್ರ ಸಲ್ಲಿಸಲಾಯಿತು. ಆದಷ್ಟು ಬೇಗನೇ ಈ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಾಗುವುದೆಂದು ಸಂಸ್ಥಾಪಕ ಅಧ್ಯಕ್ಷರಾದ ಪಿ.ಎಂ ಈಶ್ವರಪ್ಪ ಹೇಳಿದರು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾದಶ್ರೀ ರಾಮುಲು.ಯು, ಯುವ ಘಟಕದ ಅಧ್ಯಕ್ಷರಾದ ವೆಂಕಟೇಶ್, ಕಾರ್ಯಾಧ್ಯಕ್ಷರಾದ ಸುರೇಶ್,ಈಶ್ವರ್ ಭಾಸ್ಕರ್, ಪರಶುರಾಮ್, ತಿಮ್ಮಪ್ಪ, ಬಾಬು, ಜಾನು ಹಾಗೂ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ವರದಿ-ವೆಂಕಟೇಶ್. ಯು ಎಕ್ಸ್ ಪ್ರೆಸ್ ಟಿ.ವಿ ಬಳ್ಳಾರಿ.

Please follow and like us:

Related posts

Leave a Comment