ಜ್ಞಾನತಾಣ ಉದ್ಘಾಟನೆ ಕಾರ್ಯಕ್ರಮ..!

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಉದ್ಘಾಟನೆ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ತಹಸೀಲ್ದಾರ್ ಚಂದ್ರಮೌಳಿ ಉದ್ಘಾಟಿಸಿ ಮಕ್ಕಳಿಗೆ ಟ್ಯಾಬ್ ಹಾಗೂ ಲ್ಯಾಪ್ಟಾಪ್ ವಿತರಿಸಿದರು. ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ,ಗ್ರಾಮೀಣ ಪ್ರದೇಶ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಟ್ಯಾಬ್ ಹಾಗೂ ಲ್ಯಾಪ್ಟಾಪ್ ವಿತರಿಸುವ ಮೂಲಕ ನೇರವಾಗುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದವರ ಸೇವೆ ಉತ್ತಮವಾದದ್ದು, ಅದರಲ್ಲೂ ಕನ್ನಡ ಮಾಧ್ಯಮದವರಿಗೆ ಆದ್ಯತೆ ನೀಡುತ್ತಿರುವ ಬಗ್ಗೆ ಶ್ಲಾಘನೀಯ ವ್ಯಕ್ತಪಡಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ರೈತರು, ಬಡವರ ಅಭಿವೃದ್ಧಿ ಬಗ್ಗೆ ಕಾಳಜೀ ವಹಿಸುತ್ತಿದ್ದು,ಉತ್ತಮ ಬೆಳವಣಿಗೆ ಎಂದರು. ಧರ್ಮಸ್ಥಳ ಸಂಸ್ಥೆಯವರು ಲ್ಯಾಪ್ಟಾಪ್ ಹಾಗೂ ಟ್ಯಾಬ್ ಗಳನ್ನು ರಿಯಾಯಿತಿ ದರ ನೀಡುತ್ತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ವಿನಯಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ , ಜನಜಾಗೃತಿ ವೇದಿಕೆ ಸದಸ್ಯ ಶ್ರೀಕಂಠಸ್ವಾಮಿ , ಯೂನಿಯನ್ ಬ್ಯಾಂಕ್ ಪ್ರಬಂಧಕ ಪ್ರಕಾಶ್ ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment