ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ..!

ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾದೀಶರಾದ ಕೆ.ಎಂ ರಾಧಕೃಷ್ಣ ರವರು ಉದ್ಘಾಟಿಸಿ, ನಮ್ಮ ಕರ್ತವ್ಯಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುತ್ತಿಲ್ಲ.ಆದರೆ ಹಕ್ಕುಗಳನ್ನು ಪಡೆಯಲು ಆತುರ ನಮ್ಮ ಹಕ್ಕುಗಳನ್ನು ಕೇಳಬೇಕಾದರೆ ದೇಶ ಸುಬಿಕ್ಷೆಯಾಗಿರಬೇಕು. ಈ ನಿಟ್ಟಿನಲ್ಲಿ ಕಾನೂನುಗಳನ್ನು ತಿಳಿಯುವ ಅವಶ್ಯಕತೆ ಇದೆ ಎಂದರು.ಇನ್ನೂ ಸಂವಿಧಾನದ ಜೊತೆ ಕಾನೂನು ಸಹ ಬಂದಿದ್ದು ಅದರ ಬಗ್ಗೆ ಇನ್ನೂ ಸಂಪೂರ್ಣ ತಿಳುವಳಿಕೆ ಇಲ್ಲದ ಬಗ್ಗೆ ಬೇಸರ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾದೀಶೆ ಕೆ. ಶೆಮೀದಾ,1 ನೇ ಹೆಚ್ಚುವರಿ ಸಿವಿಲ್ ನ್ಯಾಯಾದೀಶೆ ಐಶ್ವರ್ಯ ಚಿದಾನಂದ ಪಟ್ಟಣಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ,ಮಳವಳ್ಳಿಟೌನ್ ಇನ್ಸ್ ಪೆಕ್ಟರ್ ರಾಜೇಶ್, ಪ್ರಭುರಾಜೇ ಅರಸು,ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಎಲ್ಲಾ ಪ್ಯಾನಲ್ ವಕೀಲರು ಸೇರಿದಂತೆ ಮತ್ತಿತ್ತರರು ಭಾಗಿಯಾಗಿದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment