ಬಿಜೆಪಿ ಪಕ್ಷದ ವಿರುದ್ದ ಗುಡುಗಿದ ಮಾಜಿ ಸಿ.ಎಂ ಸಿದ್ದರಾಮಯ್ಯ..!

ಬಾಗಲಕೋಟೆ: ಉಪ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ದುರುಪಯೋಗ ಪಡಿಸಿಕೊಂಡು ಮತ್ತು ಹಣದ ಮೂಲಕ ಗೆದ್ದಿದ್ದಾರೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿಯಲ್ಲಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಬಿಜೆಪಿ 2ಕ್ಷೇತ್ರಗಳಲ್ಲಿ ಹಣದ ಹೊಳೆ ಹರಿಸಿದೆ ಪ್ರಜಾಪ್ರಭುತ್ವದಲ್ಲಿ, ಆದ್ರೆ ನಾವು ಜನರ ತೀರ್ಪಿಗೆ ತಲೆಬಾಗುತ್ತೇವೆ, ಉಪಚುಣಾವಣೆ ಸೋಲಿನ ಹೊಣೆಯನ್ನು ಡಿ ಕೆ ಶಿವಕುಮಾರ್ ಯಾಕೆ ಹೊರಬೇಕು ಎಂದು ಡಿಕೆ ಶಿವಕುಮಾರ್ ಪರ ಸಿದ್ದರಾಮಯ್ಯ ಬ್ಯಾಟಿಂಗ್ ಬಾರಿಸಿದ್ದಾರೆ. ಇನ್ನೂ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅಧಿಕಾರ ಬದಲಾವಣೆಯ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ಗುಡುಗಿದ್ದಾರೆ

Please follow and like us:

Related posts

Leave a Comment