Uncategorized

ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಾಸಕರು ಬರಲಿದ್ದಾರೆ : ಶಾಸಕ ನಡಹಳ್ಳಿ..!

Published

on

ಮುದ್ದೇಬಿಹಾಳ: ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಾಸಕರು ಬರಲಿದ್ದಾರೆ ಎನ್ನುವ ಮೂಲಕ ಆಹಾರ ಪೂರೈಕೆ ನಿಗಮದ ಅಧ್ಯಕ್ಷ,ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಉಪ ಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆದಿರುವ ಉಪಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.ಇನ್ನಷ್ಟು ಶಾಸಕರು ಬಿಜೆಪಿಯತ್ತ ಬರಲಿದ್ದಾರೆ ಎಂದು ಹೇಳಿದ್ದಾರೆ.ಇನ್ನಷ್ಟು ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ವಲಸೆ ಬರ್ತಾರಂತೆ. ಉಪಚುನಾವಣೆಯಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷದ ನಾಯಕರ ಒಳಜಗಳವೇ,ನಮಗೆ ಲಾಭ ತಂದುಕೊಟ್ಟಿದೆ.ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಒಳಜಗಳವೇ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗಲಿದೆ. ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದಿದ್ದಾರೆ. ಈ ಜಗಳ ಇನ್ನಷ್ಟು ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಮತ್ತಷ್ಟು ರಾಜ್ಯದಲ್ಲಿ ನೆಲಕಚ್ಚಲಿದೆ ಎಂದು ಶಾಸಕ ನಡಹಳ್ಳಿ ಹೇಳಿದ್ದಾರೆ.ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿರಲಿದ್ದು, ಮುಂದಿನ ವಿಧಾನಸಭಾ ಚುನಾವಣೆಯೂ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ಯಡಿಯೂರಪ್ಪನವರು ಇಂದೋ ನಾಳೆ ಚೇಂಜ್ ಆಗಿಬಿಡ್ತಾರೆ ಎನ್ನುವುದು ಸುಳ್ಳು ಇದಕ್ಕೆ ಯಾರು ಕಿವಿಗೊಡುವ ಅವಶ್ಯಕತೆ ಇಲ್ಲ ಎನ್ನುವ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ ಬಸನಗೌಡಾ ಯತ್ನಾಳ ಅವರಿಗೆ ಶಾಸಕ ನಡಹಳ್ಳಿ ಪರೋಕ್ಷವಾಗಿ ಶಾಕ ನೀಡಿದ್ದಾರೆ. ಯಡಿಯೂರಪ್ಪ ರಾಜ್ಯದ ಬಹುದೊಡ್ಡ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು ಅಭಿಪ್ರಾಯ ನೀಡಿದ್ದಾರೆ.

ವರದಿ- ಅಮೀನ್ ಸಾಬ್ ಎಕ್ಸ್ ಪ್ರೆಸ್ ಟಿವಿ ಮುದ್ದೇಬಿಹಾಳ

Click to comment

Trending

Exit mobile version