ರಾಯಚೂರು

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ-ಮೂರು ವೈದ್ಯಕೀಯ ವಿದ್ಯಾರ್ಥಿಗಳು ಸಾವು..!

Published

on

ರಾಯಚೂರು: ಬೆಳ್ಳಂಬೆಳಗ್ಗೆ ರಾಯಚೂರು ಸಮೀಪದ ಮಂಜರ್ಲಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಭಿಷೇಕ್, ಬಸವರಾಜ್, ಗಣೇಶ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇವರು ರಾಯಚೂರಿನ ನವೋದಯ ಕಾಲೇಜಿನಲ್ಲಿ ಓದುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಯರಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Click to comment

Trending

Exit mobile version