ಪಟಾಕಿ ಸಿಡಿಸಿ ಬಿಜೆಪಿ ಪಕ್ಷದ ಗೆಲುವಿನ ಸಂಭ್ರಮಾಚರಣೆ..!

ತಿಪಟೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆಯಲ್ಲಿ ಶಿರಾ ಮತ್ತು ರಾಜರಾಜೇಶ್ವರಿ ನಗರ ಎರಡರಲ್ಲೂ ಬಿಜೆಪಿ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಪೈ ಹೋಟೆಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಗೆಲುವಿನ ಸಂಭ್ರಮ ಆಚರಿಸಿದರು. ವಿಜಯೋತ್ಸವದಲ್ಲಿ ಮಾತನಾಡಿದ ಶಾಸಕರಾದ ಬಿ ಸಿ ನಾಗೇಶ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಡಳಿತ ವೈಖರಿಯನ್ನು ಎರಡೂ ಕ್ಷೇತ್ರಗಳಲ್ಲಿ ಮತದಾರರು ಅವರಿಗೆ ನೀಡಿರುವ ಗೌರವ ಇದಾಗಿದೆ. ಅದರಲ್ಲೂ ಶಿರಾ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಗೆಲುವು ನಮಗೆ ಸ್ಫೂರ್ತಿದಾಯಕವಾಗಿದೆ. ನಮ್ಮ ಪಕ್ಷದ ಆಡಳಿತ ಜನ ಮೆಚ್ಚುಗೆಗೆ ಪಾತ್ರವಾಗಿರುವುದು ಈ ಗೆಲುವಿಗೆ ಕಾರಣವಾಗಿದೆ ಎಂದು ಖೂಷಿ ಹಂಚಿಕೊಂಡರು.

ವರದಿ-ಸಿದ್ದೇಶ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Please follow and like us:

Related posts

Leave a Comment