ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಕೊರೊನಾಗೆ ಬಲಿ..!

ನವದೆಹಲಿ- ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಇಂದು ಬೆಳಗ್ಗೆ ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಮೋರ್ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್ ಕೊರೊನಾದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಾಸಕರು ಮೃತಪಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಪತ್ನಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬಿಜೆಪಿಯ ಬಂಶೀ ಜೀನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಯಾವಾಗಲೂ ಜನರ ಹಿತವನ್ನು ಬಯಸುತ್ತಿದ್ದರು, ಜನಸೇವೆಯಲ್ಲಿಯೇ ನಿರತರಾಗಿರುತ್ತಿದ್ದರು.ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment