ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ..!

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕೆಲ ಶಾಸಕರು ಪಕ್ಷದ ಬಗ್ಗೆ ಮಾತನಾಡಿದರು. ಒಂದು ವಾರದಿಂದ 15 ದಿನಗಳ ಒಳಗೆ ಮಸ್ಕಿ ಬೈ ಎಲೆಕ್ಷನ್ ಘೋಷಣೆ ಆಗುವ ಸಾಧ್ಯತೆ ಇದೆ. ಹಾಗೂ ಕ್ಷೇತ್ರಕ್ಕೆ ನೀರಾವರಿಗೆ ಆಧ್ಯತೆ ನೀಡಲಾಗುವುದು, ಜೊತೆಗೆ ನೀರಾವರಿಗೆ 12 ಕೋಟಿ ರೂ.ಗಳ ಟೆಂಡರ್ ಪ್ರಕ್ರಿಯೆ ಆರಂಭವಾಗುತ್ತದೆ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ ನೀಡಿದರು. ಇನ್ನೂ ವೇದಿಕೆ ಮೇಲೆ ಕೇಕ್ ಕಟ್ ಮಾಡುವುದರ ಮೂಲಕ ಹುಟ್ಟು ಹಬ್ಬವನ್ನು ಆಚರಿಕೊಂಡ ಕೊಪ್ಪಳ ಸಂಸದ ಕರಡಿ ಸಂಗಣ್ಣ ಇಂದಿನ ದಿನ ಇತಿಹಾಸವನ್ನು ಬರೆಯುವ ದಿನ 17 ಜನ ಶಾಸಕರು ಸಮ್ಮಿಶ್ರ ಸರ್ಕಾರವನ್ನು ಕೆಡವಲು ತೀರ್ಮಾನಿಸಿದ್ದರು. ಅದರಲ್ಲಿ ಮುಂಚೂಣಿಯಲ್ಲಿದ್ದವರು ಪ್ರತಾಪಗೌಡ ಪಾಟೀಲ್ 17 ಜನ ಶಾಸಕರ ರಾಜೀನಾಮೆಯಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ ಮಸ್ಕಿ ಮತ್ತು ಲಿಂಗಸೂಗೂರು ಭಾಗಗಳ ರೈತರ ಜಮೀನುಗಳಿಗೆ ನೀರು ಕೊಡುವ ಕೆಲಸ ಮಾಡುತ್ತೇವೆ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ತಿಳಿಸಿದರು. ಇನ್ನೂ ಸಭೆಯಲ್ಲಿ ಸುರಪುರ ಶಾಸಕ ರಾಜುಗೌಡ ಮಾತನಾಡಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಪ್ರತಾಪಗೌಡ ಪಾಟೀಲ್ ಆನಂದ್ ಸಿಂಗ್ ಕಾರಣ ವಿರೋಧ ಪಕ್ಷದವರ ಮಾತಿಗೆ ಬೆಲೆ ಕೊಡಬೇಡಿ, ಈ ಬಾರಿಯ ಚುನಾವಣೆಯಲ್ಲಿ ಪ್ರತಾಪಗೌಡರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment