ಮರಾಠ ಅಭಿವೃದ್ದಿ ಪ್ರಾಧಿಕಾರ ಖಂಡಿಸಿ ಪ್ರತಿಭಟನೆ..!

ಹುಬ್ಬಳ್ಳಿ; ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರವ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ರದ್ದು ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ಬಾಭಿಮಾನಿ ಬಣದವರು ಹುಬ್ಬಳ್ಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯ್ತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನೆಡೆಸಿದ ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನ ಹೋರಹಾಕಿದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ನಾಡು-ನುಡಿ,ನೆಲ ಜಲ ವಿಚಾರವಾಗಿ ಹಾಗೂ ರೈತರು ಹಾಗೂ ಕಾರ್ಮಿಕರ,ನೊಂದವರ ಪರವಾಗಿ ಹೋರಾಟ ಮಾಡುತ್ತ ಬಂದಿದೆ.ಇತ್ತೀಚೆಗೆ ವಿಶ್ವದಾದ್ಯಂತ ಕೊರೋನಾ ಎಂಬ ಮಹಾಮಾರಿ ರೋಗ ಒಂದು ಕಡೆ ರಾಜ್ಯವನ್ನ ದಿವಾಳಿ ದಿಕ್ಕಿನೆಡೆಗೆ ಕೊಂಡೊಯ್ಯುತ್ತಿದ್ದು,ಉತ್ತರ ಕರ್ನಾಟಕವೂ ಮಳೆಯ ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಅತಿವೃಷ್ಠಿಯಿಂದ ರೈತರ ಬೆಳೆಗಳು ನಾಶವಾಗಿದ್ದು ಪ್ರವಾಹ ಪೀಡಿತರಿಗೆ, ರೈತರಿಗೆ ಹಾಗೂ ನಿರಾಶ್ರಿತರಿಗೆ ಸರ್ಕಾರ ನೆರವು ನೀಡದೇ ,ಮರಾಠಿಗರ ಬೇಡಿಕೆಗಳನ್ನ ಈಡೇರಿಸಿ,ಅಧಿಕಾರದ ದುರಾಸೆಗಾಗಿ ಮರಾಠರ ಓಲೈಕೆಗಾಗಿ ಅವರನ್ನ ಮತ ಬ್ಯಾಂಕ ಮಾಡುವ ಷಡ್ಯಂತ್ರಕ್ಕಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವುದು ಸರಿಯಲ್ಲ.ಕೂಡಲೇ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ರದ್ದು ಪಡಿಸುವಂತೆ ತಹಶಿಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು..

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment