ಬೆಂಗಳೂರು

ಕೊರೊನಾ ಕೇಸುಗಳ ಹೆಚ್ಚಳ ಹಿನ್ನೆಲೆ-ನಾಳೆ 8 ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಮಂತ್ರಿ ಸಭೆ..!

Published

on

ಬೆಂಗಳೂರು: ಕೊರೊನಾ ಸೋಂಕಿನ ಪರಿಸ್ಥಿತಿ ಕುರಿತಾಗಿ ನಾಳೆ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ಸಭೆ ನಡೆಸಲಿದ್ದಾರೆ.ಎರಡು ಹಂತಗಳಲ್ಲಿ ಸಿಎಂಗಳ ಸಭೆ ನಡೆಯಲಿದೆ. ಮೊದಲ ಹಂತದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳಿರುವ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಯಲಿದೆ. ಕೊರೊನಾ ವೈರಸ್ ನಿಯಂತ್ರಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಪ್ರಧಾನಿ ಹಾಗೂ ಸಿಎಂಗಳು ಸಮಾಲೋಚನೆ ನಡೆಸಲಿದ್ದಾರೆ.ಬಳಿಕ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರತಿನಿಧಿಗಳ ಜೊತೆ ಮೋದಿ ಮತ್ತೊಂದು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version